ಉಡುಪಿ: ಬೆಳ್ತಂಗಡಿ ತಾಲೂಕು ಸುಬ್ರಹ್ಮಣ್ಯ ರಸ್ತೆ ರಾಜ್ಯ ಹೆದ್ದಾರಿ 17 ರ ಗುರುವಾಯನಕೆರೆ ಶಕ್ತಿನಗರದಿಂದ ಪಿಲ್ಯ ವರೆಗೆ ಅಭಿವೃದ್ಧಿ ಕಾಮಗಾರಿಗೆ ಅಡಚಣೆಯಾಗುವ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ 314 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ನವೆಂಬರ್ 7 ರಂದು ಮಧ್ಯಾಹ್ನ 3 ಗಂಟೆಗೆ ಅಳದಂಗಡಿ ಗ್ರಾಮ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ [email protected] ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.