ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿಗಾಗಿ ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಉಡುಪಿ ನಗರಸಭಾ ವ್ಯಾಪ್ತಿಯ ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗೆ ಕಾಮಗಾರಿಗೆ ಅಡಚಣೆಯಾಗುವ 205 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿ.27 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ವಲಯ ಕಚೇರಿಯ ಸಭಾಂಗಣದಲ್ಲಿ ಹಾಗೂ ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಳ್ಳುಗುಡ್ಡೆಯಿಂದ ತಾಣದಮನೆವರೆಗೆ ಇರುವ ಒಟ್ಟು 1549 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿ. 31 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.