ವಾರಾಹಿ ಏತ ನೀರಾವರಿ ಯೋಜನೆಗಾಗಿ ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

ಉಡುಪಿ: ವಾರಾಹಿ ಏತ ನೀರಾವರಿ ಯೋಜನಾ ಕಾಮಗಾರಿಗೆ ಸಂಬಂಧಿಸಿದಂತೆ ಕುಂದಾಪುರ ತಾಲೂಕು ಹಾಲಾಡಿ ಗ್ರಾಮದ ಸರ್ವೇ ನಂ. 139 ರಲ್ಲಿ ಕಾಲುವೆ ನಿರ್ಮಾಣಕ್ಕೆ ಅಡಚಣೆಯಾಗುವ ಒಟ್ಟು 316 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 23 ರಂದು ಮಧ್ಯಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ [email protected] ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.