ಉಡುಪಿ: ಉಡುಪಿ ನಗರಕ್ಕೆ ವಾರಾಹಿ ನದಿಯಿಂದ ಕುಡಿಯುವ ನೀರು ಸರಬರಾಜು ಯೋಜನೆಯಡಿ
ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಜೆ.ಎಲ್.ಎಸ್.ಆರ್ ವರೆಗೆ ಪೈಪ್‌ಲೈನ್ ಅಳವಡಿಸುವ ಕಾಮಗಾರಿಗೆ ಸಂಬಂಧಿಸಿದಂತೆ, ಕಾಮಗಾರಿಗೆ ಅಡಚಣೆಯಾಗುವ 58 ಗಿಡಗಳನ್ನು ತೆರವುಗೊಳಿಸುವ ಕುರಿತು ಜುಲೈ 18 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಗೆ ಹಾಜರಾಗಿ ಅಥವಾ ಸಭೆ ನಡೆಯುವ ದಿನಾಂಕದ ಒಳಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಉಪ ಸಂರಕ್ಷಣಾಧಿಕಾರಿಯವರ ತಾಂತ್ರಿಕ ಸಹಾಯಕರು, ಕುಂದಾಪುರ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ [email protected]ಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.