ಸಂತೆಕಟ್ಟೆ ಸರ್ವೀಸ್ ರೋಡ್ ಕಾಮಗಾರಿಗಾಗಿ ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಉಡುಪಿ ತಾಲೂಕು ಸಂತೆಕಟ್ಟೆ ಜಂಕ್ಷನ್‌ನಿಂದ ಉಪ್ಪೂರು ಬ್ರಿಡ್ಜ್ ವರೆಗಿನ ರಾಷ್ಟ್ರೀಯ ಹೆದ್ದಾರಿ 66 ರ ಪಕ್ಕ ಸರ್ವೀಸ್ ರೋಡ್ ನಿರ್ಮಾಣಕ್ಕೆ ಅಡಚಣೆಯಾಗುವ ವಿವಿಧ ಜಾತಿಯ 109 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಫೆಬ್ರವರಿ 6 ರಂದು ಬೆಳಗ್ಗೆ 11 ಗಂಟೆಗೆ ಉಡುಪಿ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ [email protected] ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.