ಕಡಂದಲೆಯಲ್ಲಿ ವಿದ್ಯುತ್ ಕೇಂದ್ರ ಸ್ಥಾಪನೆಗೆ 2229 ಮರಗಳ ತೆರವು: ಅಹವಾಲು ಸಭೆ

ಉಡುಪಿ: ಮೂಡಬಿದ್ರೆ ತಾಲೂಕು ಕಡಂದಲೆ ಗ್ರಾಮದ ಸ.ನಂ. 308/ಪಿ1 ರಲ್ಲಿ ವಿದ್ಯುತ್ ಕೇಂದ್ರದ ಸ್ಥಾಪನೆಗಾಗಿ ಕಾಯ್ದಿರಿಸಿದ ಸ್ಥಳದಲ್ಲಿನ ಒಟ್ಟು 2229 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಫೆಬ್ರವರಿ 20 ರಂದು ಬೆಳಗ್ಗೆ 11 ಗಂಟೆಗೆ ಮೂಡಬಿದ್ರೆ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ [email protected] ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.