ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರಗಳ ತೆರವು: ಡಿಸೆಂಬರ್ 22 ರಂದು ಸಾರ್ವಜನಿಕ ಅಹವಾಲು ಸಭೆ

ಉಡುಪಿ: ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ,
ಕಾಮಗಾರಿಗೆ ಅಡಚಣೆಯಾಗುವ ಹೆಬ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಳಪೇಟೆಯಿಂದ ಕೊಳಗುಡ್ಡೆವರೆಗೆ ಒಟ್ಟು 862 ಮರಗಳನ್ನು ಹಾಗೂ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಳಗುಡ್ಡೆಯಿಂದ ಮುಳ್ಳುಗುಡ್ಡೆವರೆಗೆ ಒಟ್ಟು 580 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಡಿಸೆಂಬರ್ 22 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ
ಅಹವಾಲು ಸಭೆ ನಡೆಯಲಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ [email protected] ನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.