ವಾರಾಹಿ ಯೋಜನೆಗಾಗಿ ಮರಗಳ ತೆರವು: ಜ. 16 ರಂದು ಸಾರ್ವಜನಿಕ ಅಹವಾಲು ಸಭೆ

ಕುಂದಾಪುರ: ವಾರಾಹಿ ಏತ ನೀರಾವರಿ ಯೋಜನಾ ಕಾಮಗಾರಿಗೆ ಸಂಬಂಧಿಸಿದಂತೆ, ಕುಂದಾಪುರ ತಾಲೂಕು ಹಾಲಾಡಿ ಗ್ರಾಮದ ಸ.ನಂ. 139 ರಲ್ಲಿ ಕಾಲುವೆ ನಿರ್ಮಾಣಕ್ಕೆ ಅಡಚಣೆಯಾಗುವ ಒಟ್ಟು 343 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಜನವರಿ 16 ರಂದು ಮಧ್ಯಾಹ್ನ 3 ಗಂಟೆಗೆ ಶಂಕರನಾರಾಯಣ ವಲಯ ಅರಣ್ಯಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ.

ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpuforest@yahoo.comನಲ್ಲಿಯೂ ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.