ಮೇ 24ರಿಂದ ಪಿಯುಸಿ, ಜೂನ್ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ: ಸಚಿವ ಸುರೇಶ್ ಕುಮಾರ್

ವಿಜಯಪುರ: ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಿಗೆ ಸರ್ಕಾರ ದಿನಾಂಕ ನಿಗದಿಪಡಿಸಿದೆ. ಮೇ 24ರಿಂದ ಪಿಯುಸಿ ಹಾಗೂ ಜೂನ್ 21 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುರುವಾರ ತಿಳಿಸಿದ್ದಾರೆ.

1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಪರೀಕ್ಷೆ ನಡೆಸಬೇಕೆ ಅಥವಾ ಬೇಡವೆ ಎಂಬ ಬಗ್ಗೆ ಸರ್ಕಾರ ತೀರ್ಮಾನಿಸಲಿದೆ ಎಂದು ಹೇಳಿದ್ದಾರೆ.