ಪಲ್ಸ್ ಪೋಲಿಯೋ ಹಾಕುವ ಕಾರ್ಯಕ್ರಮ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ನವದೆಹಲಿ: ಜನವರಿ 16ರಿಂದ ದೇಶಾದ್ಯಂತ ಕೊರೊನಾ ಲಸಿಕೆ ನೀಡಲಿರುವ ಹಿನ್ನೆಲೆಯಲ್ಲಿ ಜನವರಿ 17ರಂದು ನಿಗದಿಯಾಗಿದ್ದ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮವನ್ನು ಕೇಂದ್ರ ಸರ್ಕಾರವು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದೆ.

ಕೊರೊನಾ ಲಸಿಕೆ ನೀಡಲಿರುವ ಹಿನ್ನೆಲೆಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರಗಳು ಮನವಿ ಮಾಡಿದ್ದವು. ಹೀಗಾಗಿ ಕೇಂದ್ರ ಸರ್ಕಾರ ಪಲ್ಸ್ ಪೋಲಿಯೋ ಹಾಕುವ ಕಾರ್ಯಕ್ರಮವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಿದೆ. ಈ ಬಗ್ಗೆ ಕೇಂದ್ರವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದೆ.