ಪುಲ್ವಾಮಾ: ಪುಲ್ವಾಮಾ ಕಂಗಾನ್ ಪ್ರದೇಶದಲ್ಲಿ ಜೂನ್ 3ರಂದು ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಉಗ್ರರು ಎನ್ಕೌಂಟರ್ಗೆ ಬಲಿಯಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ತಿಳಿಸಿದ್ದಾರೆ.
ಬಲಿಯಾದ ಉಗ್ರರಲ್ಲಿ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಈಗ ಆ ಪ್ರದೇಶದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಿದ್ದು, ಹೆಚ್ಚಿನ ಮಾಹಿತಿ ಇನ್ನೂ ಬರಬೇಕಾಗಿದೆ.
ಜೂನ್ 2 ಕ್ಕೆ ಟ್ರಾಲ್ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರೂ ಜೈಶ್ ಎ. ಮೊಹಮ್ಮದ್ ತಂಡದ ಭಯೋತ್ಪಾದಕರು ಮೃತಪಟ್ಟಿದ್ದು, ಅಲ್ಲಿ ಎರಡು ಪಿಸ್ತೂಲ್ಗಳು ಮತ್ತು ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ.