ಪುಣೆ: ಜಿಮ್ ನಲ್ಲಿ ವರ್ಕೌಟ್ ಮಾಡಿದ ಬಳಿಕ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ 37 ವರ್ಷದ ವ್ಯಕ್ತಿ ಸಾವು.!

ಪುಣೆ: ಪುಣೆಯ ಪಿಂಪ್ರಿ-ಚಿಂಚ್‌ವಾಡ್‌ನಲ್ಲಿರುವ ಜಿಮ್‌ನಲ್ಲಿ ಶುಕ್ರವಾರ ಬೆಳಿಗ್ಗೆ ವರ್ಕೌಟ್ ನಂತರ ವ್ಯಕ್ತಿಯೊಬ್ಬರು ತಮ್ಮ ಬಾಟಲಿಯಿಂದ ನೀರು ಕುಡಿದಿದ್ದಾರೆ. ಬಳಿಕ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಜಿಮ್‌ನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆಯು ಸೆರೆಯಾಗಿದೆ.

ಜಿಮ್‌ನಲ್ಲಿದ್ದ ಇತರರು ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, 37 ವರ್ಷದ ಮಿಲಿಂದ್ ಕುಲಕರ್ಣಿ ಅವರು ಆಸ್ಪತ್ರೆಗೆ ಬರುವಷ್ಟರಲ್ಲಿ ಮೃತಪಟ್ಟಿದ್ದಾರೆಂದು ವೈದ್ಯರು ಘೋಷಿಸಿದ್ದಾರೆ.

ವರದಿಗಳ ಪ್ರಕಾರ, ಕುಲಕರ್ಣಿ ಅವರ ಪತ್ನಿಯೂ ಈ ಹಿಂದೆ ಹೃದಯಾಘಾತದಿಂದ ನಿಧನರಾದರು. ಅವರು ವೈದ್ಯೆಯಾಗಿದ್ದರು.