ಇಂದೇ ನಟ ಪುನೀತ್ ರಾಜ್ ಕುಮಾರ್ ಅಂತ್ಯಕ್ರಿಯೆ; ಸಂಜೆ ಬೆಂಗಳೂರಿಗೆ ಆಗಮಿಸಲಿರುವ ಪುನೀತ್ ಪುತ್ರಿ

ಬೆಂಗಳೂರು: ವಿದ್ಯಾಭ್ಯಾಸಕ್ಕಾಗಿ ಅಮೆರಿಕಕ್ಕೆ ತೆರಳಿರುವ ನಟ ಪುನೀತ್ ರಾಜ್ ಕುಮಾರ್ ಪುತ್ರಿ ಧೃತಿ ಅಲ್ಲಿಂದ ಹೊರಟಿದ್ದು, ಸಂಜೆ ಬೆಂಗಳೂರಿಗೆ ತಲುಪಲಿದ್ದಾರೆ. ಈ ಹಿನ್ನೆಲೆಯಲ್ಲಿ ಪುನೀತ್ ರಾಜ್‌ಕುಮಾರ್‌ ಅವರ ಅಂತ್ಯಕ್ರಿಯೆ ಇಂದೇ ನಡೆಯಲಿದೆ ಎಂದು ನಟ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್‌ ತಿಳಿಸಿದ್ದಾರೆ.

ಮಧ್ಯಾಹ್ನ ಮೂರು ಗಂಟೆಗೆ ಕಂಠೀರವ ಕ್ರೀಡಾಂಗಣದಿಂದ ಪುನೀತ್ ಅಂತಿಮಯಾತ್ರೆ ಆರಂಭವಾಗಲಿದೆ. 5 ಗಂಟೆ ಸುಮಾರಿಗೆ ಅಂತ್ಯ ಸಂಸ್ಕಾರ ನಡೆಯಲಿರುವ ಕಂಠೀರವ ಸ್ಟುಡಿಯೊ ಆವರಣದಲ್ಲಿರುವ ಡಾ. ರಾಜ್ ಸ್ಮಾರಕದ ಆವರಣಕ್ಕೆ ತಲುಪಲಿದೆ. ಆ ಬಳಿಕ ಧಾರ್ಮಿಕ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಯಲಿದೆ ಎಂದು ರಾಕ್ ಲೈನ್ ವೆಂಕಟೇಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪುನೀತ್ ಪುತ್ರಿ ಧೃತಿ ಅಮೆರಿಕದಿಂದ ಹೊರಟಿದ್ದು, ಮಧ್ಯಾಹ್ನ 1 ಗಂಟೆ ಹೊತ್ತಿಗೆ ದೆಹಲಿ ತಲುಪಲಿದ್ದಾರೆ. ಅಲ್ಲಿಂದ ಚಾರ್ಟೆಡ್ ವಿಮಾನದ ಮೂಲಕ 4.30 ರ ಸುಮಾರಿಗೆ ಬೆಂಗಳೂರು ತಲುಪಲಿದ್ದಾರೆ ಎಂದು ತಿಳಿದುಬಂದಿದೆ.