ಪುತ್ತೂರು: ಅತ್ಯಾಚಾರ ಪ್ರಕರಣ; ಆರೋಪಿ ಕೃಷ್ಣ ರಾವ್ ಪೊಲೀಸರ ವಶಕ್ಕೆ.

ಪುತ್ತೂರು: ಪುತ್ತೂರಿನ ಬಿಜೆಪಿ ಮುಖಂಡರೊಬ್ಬರ ಪುತ್ರ ಕೃಷ್ಣ ರಾವ್ ಎಂಬಾತನ ವಿರುದ್ಧ ಕೆಲ ದಿನಗಳ ಹಿಂದೆ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಯುವತಿ ಗರ್ಭಿಣಿ ಆಗುತ್ತಿದ್ದಂತೆ ಆತ ಆಕೆಯನ್ನು ಮದುವೆಯಾಗಲು ನಿರಾಕರಿಸಿ ನಾಪತ್ತೆಯಾಗಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂತ್ರಸ್ತ ಯುವತಿ ಗರ್ಭಿಣಿಯಾದ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ್ದು, ಆತ ಕೈಕೊಟ್ಟಿದ್ದರಿಂದ ಕಂಗಾಲಾದ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಆತ ಬಂಧನದ ಭಯದಿಂದ ಎಸ್ಕೇಪ್ ಆಗಿದ್ದ. ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಕೃಷ್ಣ ಜೆ ರಾವ್ ಎಂಬಾತನನ್ನು ಪೋಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದು, ನಿನ್ನೆ ರಾತ್ರಿಯೇ ಪುತ್ತೂರಿಗೆ ಕರೆತಂದಿರುವ ಪೋಲೀಸರು ಇಂದು ಸಂಜೆ ವೇಳೆಗೆ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಕಳೆದ 10 ದಿನಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಬೇಕೆಂದು ಹಲವು ಸಂಘಟನೆಗಳಿಂದ ಪ್ರತಿಭಟನೆಯೂ ನಡೆದಿತ್ತು.