ಅತ್ಯಾಚಾರ ವಂಚನೆ ಪ್ರಕರಣ: ಆರೋಪಿ ಶ್ರೀಕೃಷ್ಣರಾವ್ ಗೆ ಹೈಕೋರ್ಟ್ ಜಾಮೀನು

ಪುತ್ತೂರು : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿ ಬಂಧಿತನಾಗಿದ್ದ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ. ರಾವ್ (21) ಗೆ ಹೈಕೋರ್ಟ್ ಬುಧವಾರ ಷರತ್ತುಬದ್ದ ಜಾಮೀನು‌ ಮಂಜೂರು ಮಾಡಿದ್ದು, ಗುರುವಾರ ಜೈಲಿನಿಂದ ಬಿಡುಗಡೆ ಪ್ರಕ್ರಿಯೆ ನಡೆದಿದೆ.

ಆರೋಪಿ ವಿರುದ್ಧ ದ.ಕ. ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿತ್ತು. ಸಂತ್ರಸ್ತೆ (21) ಕೂಡ ಪುತ್ತೂರು ನಗರಸಭಾ ವ್ಯಾಪ್ತಿಯ ನಿವಾಸಿಯಾಗಿದ್ದು, ಮಂಗಳೂರಿನ ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಪೂರ್ಣಗೊಳಿಸಿದ್ದಾರೆ. ಜು‌.5 ರಂದು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು.