ನವದೆಹಲಿ: ಜೂನ್ 30ಕ್ಕೆ ಅಂತ್ಯಗೊಂಡ ತ್ರೈಮಾಸಿಕದಲ್ಲಿ ದೇಶದ ಜಿಡಿಪಿ ಕಳೆದ 40 ವರ್ಷಗಳಲ್ಲಿ ಶೇಕಡಾ 23.9ರಷ್ಟು ಕುಸಿದಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು 2016ರ ನವೆಂಬರ್ 8ರಂದು ಕೈಗೊಂಡ ನೋಟು ಅಮಾನ್ಯೀಕರಣ ನಿರ್ಧಾರವೇ ಪ್ರಮುಖ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ವಿಡಿಯೋ ಹೇಳಿಕೆ ಮೂಲಕ ಟೀಕಿಸಿರುವ ಅವರು, ನೋಟು ಅಮಾನ್ಯೀಕರಣದಿಂದ ದೇಶದ ಜಿಡಿಪಿ ತಳಮಟ್ಟಕ್ಕೆ ಇಳಿದಿದೆ ಎಂದು ಗುಡುಗಿದ್ದಾರೆ.
ದೇಶದ ಬಡವರು, ರೈತರು, ಅಸಂಘಟಿತ ವಲಯಗಳ ಮೇಲೆ ದಾಳಿ ನಡೆಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಎಲ್ಲರೂ ಒಟ್ಟಾಗಿ ನಿಂತು ಹೋರಾಟ ಮಾಡಬೇಕು ಎಂದು ಕರೆನೀಡಿದ್ದಾರೆ.