ಇಂದು ರಾಹುಲ್‌ಗಾಂಧಿ ನೇತೃತ್ವದಲ್ಲಿ ಉ.ಪ.ಸಂತ್ರಸ್ತೆಯ ಕುಟುಂಬದ ಭೇಟಿ

ಬೆಂಗಳೂರು: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿರುವ ಅಪ್ರಾಪ್ತ ಯುವತಿ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಇಡೀ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.ಉತ್ತರ ಪ್ರದೇಶದ ಸಿಎಂ ಯೋಗಿ ವಿರುದ್ದವೂ ಜನಾಕ್ರೋಶ ವ್ಯಕ್ತವಾಗಿದೆ.ಇಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ನಿಯೋಗ  ಸಂತ್ರಸ್ಥೆಯ ಕುಟುಂಬವನ್ನು ಭೇಟಿ ಮಾಡಲಿದೆ.

ಪಕ್ಷದ ಸಂಸದರೊಂದಿಗೆ ರಾಹುಲ್ ಗಾಂಧಿ ಇಂದು ಮಧ್ಯಾಹ್ನ ಹತ್ರಾಸ್ ಗೆ ಭೇಟಿ ನೀಡಲಿದ್ದು, ಬರ್ಬರ ರೀತಿಯಲ್ಲಿ ಹಲ್ಲೆಗೊಳಗಾಗಿ ಮೃತಪಟ್ಟಿರುವ 19 ವರ್ಷದ ಹೆಣ್ಣುಮಗಳ ಕುಟುಂಬ ಸದಸ್ಯರನ್ನು ಭೇಟಿ ಮಾಡುವುದಾಗಿ ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.