ರಾಯಚೂರು:ಒಂದೇ ಮನೆಯ ಮೂವರು ಯುವತಿಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದಂತಹ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕೆ ಇರಬಗೇರಾ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಘಟನೆಯಲ್ಲಿ ಇರಬಗೇರಾ ಗ್ರಾಮದ ರೇಣುಕಾ ರಂಗಪ್ಪ (18) ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮತ್ತಿಬ್ಬರು ಯುವತಿಯರು ತೀವ್ರ ಅಸ್ವಸ್ಥರಾಗಿದ್ದು, ನಗರದ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುನಿತಾ ಕರಿಯಪ್ಪ ಸ್ಥಿತಿ ಗಂಭೀರವಾಗಿದೆ. ಅಲ್ಲದೆ, ತಿಮ್ಮವ್ವ ನಾಗಪ್ಪ ಎಂಬ ಯುವತಿಯೂ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿಕೆ ಕೊಟ್ಟಿದ್ದಾರೆ.
ದೇವದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿದು ಗ್ರಾಮಕ್ಕೆ ಭೇಟಿ ನೀಡಿದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.












