ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.23ರಂದು ರಜೆ ಘೋಷಿಸಲಾಗಿದೆ.
25 ರ ವರೆಗೆ ರೆಡ್ ಅಲರ್ಟ್ ಘೋಷಿಸಿರುವ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಅಲ್ಲದೇ ಮೀನುಗಾರರಿಗೆ ಕಡ್ಡಾಯವಾಗಿ ಸಮುದ್ರಕ್ಕೆ ಇಳಿಯಯಂತೆ ಸೂಚಿಸಿದ್ದಾರೆ.