ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯಾಗುವ ಸಾಧ್ಯತೆ

ರಾಜ್ಯದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ರಾಮನಗರ ಜಿಲ್ಲೆಗಳಲ್ಲಿ ಜೂನ್ 2ರವರೆಗೂ ಅಧಿಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಮೈಸೂರು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಗರಿಷ್ಠ ಉಷ್ಣಾಂಶವು ರಾಜ್ಯದ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.

ರಾಯಚೂರಿನಲ್ಲಿ 40.6 ಡಿಗ್ರಿ ಸೆಲ್ಸಿಯಸ್ ಅತ್ಯಧಿಕ ಉಷ್ಣಾಂಶ ದಾಖಳಾಗಿದೆ, ಬೇಲೂರು, ಹುಣಸೂರು, ಕಳಸ, ಶಿರಾಲಿಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಮಧ್ಯಾಹ್ನದ ಬಳಿಕ ಮೋಡಕವಿದ ವಾತಾವರಣ ನಿರ್ಮಾಣವಾಗಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಎಚ್ಎಎಲ್ನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.