ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಮೋಕಾ: ಮೇ 12ರ ವರೆಗೆ ಪೂರ್ವ ಕರಾವಳಿಯಲ್ಲಿ ಮಳೆ ಸಾಧ್ಯತೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆಯು ಆಗ್ನೇಯ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಅಭಿವೃದ್ಧಿ ಹೊಂದುತ್ತಿದ್ದು ಚಂಡಮಾರುತ ಮೋಕಾದ ಬಗ್ಗೆ ಸೂಚನೆ ನೀಡಿದ್ದು ಇದು ಮೇ 8 ರಿಂದ ಮೇ 12 ರವರೆಗೆ ದಕ್ಷಿಣ ಭಾರತದ ಹಲವೆಡೆ ಮುಂದಿನ ಕೆಲವು ದಿನಗಳವರೆಗೆ ಮಳೆಗೆ ಕಾರಣವಾಗಬಹುದು ಎಂದು ಹೇಳಿದೆ. ಹವಾಮಾನ ಸ್ಥಿತಿಯು ಮೇ 9 ರ ಸುಮಾರಿಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವನ್ನು ರೂಪಿಸುವ ಸಾಧ್ಯತೆಯಿದೆ ಮತ್ತು ನಂತರ ಚಂಡಮಾರುತವಾಗಿತೀವ್ರಗೊಳ್ಳುತ್ತದೆ ಎಂದು ಅದು ಹೇಳಿದೆ.

ಯೆಮೆನ್‌ನಲ್ಲಿರುವ ಮೋಕಾ ಅಥವಾ ಮುಖಾ ನಗರವು ದೇಶದ ರಾಜಧಾನಿ ಸನಾದ ಪ್ರಮುಖ ಬಂದರಾಗಿದ್ದು, ಚಂಡಮಾರುತಕ್ಕೆ ಈ ಹೆಸರನ್ನು ಇಡಲಾಗಿದೆ.

ಈ ದಿನಗಳಲ್ಲಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಚದುರಿದ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯೊಂದಿಗೆ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಊಹಿಸಲಾಗಿದೆ. ಆಗ್ನೇಯ ಬಂಗಾಳ ಕೊಲ್ಲಿಯರುವವರಿಗೆ ಹಾಗೂ ಮೀನುಗಾರರಿಗೆ ಈಗಾಗಲೇ ಮುನ್ಸೂಚನೆಗಳನ್ನು ನೀಡಲಾಗಿದೆ. ಸಮುದ್ರ ತೀರದಲ್ಲಿ ಪ್ರವಾಸೋದ್ಯಮ ಸೇರಿದಂತೆ ಎಲ್ಲಾ ಚಟುವಟಿಕೆಗಳನ್ನು ಸ್ಥಬ್ದಗೊಳಿಸುವಂತೆ ಸೂಚಿಸಲಾಗಿದೆ. ಚಂಡಮಾರುತವು ಬಾಂಗ್ಲಾ ದೇಶದತ್ತ ಪಯಣಿಸಲಿದೆ ಎಂದು ಅಂದಾಜಿಸಲಾಗಿದೆ.