ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿದ್ದು, ಇದರ ಪರಿಣಾಮ ಜುಲೈ 8ರಿಂದ 12ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 11ರಂದು ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿದ್ದು ಇದರ ಪರಿಣಾಮ ಕರಾವಳಿ, ದಕ್ಷಿಣ ಹಾಗೂ ಉತ್ತರ ಕರ್ನಾಟಕ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಮೂನ್ಸೂಚನೆಯಿದೆ. ಕರಾವಳಿ ಭಾಗದಲ್ಲಿ ಜುಲೈ 8 ರಂದು ಯೆಲ್ಲೋ ಅಲರ್ಟ್, ಜುಲೈ 9 ರಿಂದ 12 ರವರೆಗೆ ಆರೇಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದೆ.
ಉತ್ತರ ಕರ್ನಾಟಕ ಭಾಗದ ಕೆಲ ಜಿಲ್ಲೆಗಳಲ್ಲಿ ಕೂಡ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು ಅಲ್ಲಿ ಕೂಡ ಜುಲೈ 11 ಮತ್ತು 12 ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ, ಇನ್ನು ಬೆಂಗಳೂರಿನಾದ್ಯಂತ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿದ್ದು ಅಲರ್ಟ್ ಆಗಿರುವಂತೆ ಸೂಚಿಸಿದೆ.