ರಾಜಮೌಳಿ ಅವರ RRR ಚಿತ್ರದ ‘ನಾಟು ನಾಟು’ ಹಾಡಿಗೆ ಆಸ್ಕರ್ ಪ್ರಶಸ್ತಿ

ಲಾಸ್ ಏಂಜಲೀಸ್: ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಈ ಹಾಡಿಗೆ ಈಗಾಗಲೇ ಕ್ರಿಟಿಕ್ಸ್ ಚಾಯ್ಸ್ ಅವಾರ್ಡ್ಸ್, ಗೋಲ್ಡನ್ ಗ್ಲೋಬ್, ಹಾಲಿವುಡ್ ಮ್ಯೂಸಿಕ್ ಇನ್ ಮಿಡಿಯಾ ಅವಾರ್ಡ್ಸ್ ಸೇರಿದಂತೆ ಹಲವಾರು ಪ್ರಶಸ್ತಿಗಳು ಲಭಿಸಿದೆ