ಜೈಪುರ: ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಹಿನ್ನಡೆ ಉಂಟಾಗಿದೆ.
4,371 ಪಂಚಾಯತ್ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 1,835, ಕಾಂಗ್ರೆಸ್ 1,718 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ 56 ಮಂದಿ, 420 ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜಿಲ್ಲಾ ಪರಿಷತ್ ಒಟ್ಟು 636 ಸ್ಥಾನಗಳ ಪೈಕಿ ಬಿಜೆಪಿ 266, ಕಾಂಗ್ರೆಸ್ 204 ಸ್ಥಾನಗಳನ್ನು ಗೆದ್ದುಕೊಂಡಿದೆ.
ಪಂಚಾಯತ್ ಸಮಿತಿ ಮತ್ತು ಜಿಲಾ ಪರಿಷತ್ ಚುನಾವಣೆಯ ಮತಎಣಿಕೆ ಇನ್ನೂ ನಡೆಯುತ್ತಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.