ಚಿಕ್ಕಮಗಳೂರು: ರಾಷ್ಟ್ರ ಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನಲ್ಲಿ ವಾಸವಾಗಿದ್ದ ರಾಜೇಶ್ವರಿ ತೇಜಸ್ವಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದ ಕಾರಣ ಬೆಂಗಳೂರಿಗೆ ಆಗಮಿಸಿದ್ದರು. ಕಳೆದ ನಾಲ್ಕು ದಿನಗಳಿಂದ ನಗರದ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದರು. ಪತಿ ಪೂರ್ಣಚಂದ್ರ ತೇಜಸ್ವಿ ನಿಧನದ ಬಳಿಕ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹ್ಯಾಂಡಪೋಸ್ಟ್ ತೋಟದ ಮನೆಯಲ್ಲಿ ತೇಜಸ್ವಿ ಅವರು ವಾಸಿಸುತ್ತಿದ್ದರು.