ನವದೆಹಲಿ: ನೂತನ ಚುನಾವಣಾ ಆಯುಕ್ತರಾಗಿ ರಾಜೀವ್ ಕುಮಾರ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡರು.
ಆಯುಕ್ತರಾಗಿದ್ದ ಅಶೋಕ್ ಲಾವಾಸ ಅವರಿಂದ ತೆರವಾದ ಸ್ಥಾನದಲ್ಲಿ ರಾಜೀವ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಲಾವಾಸ ಅವರು ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ರಾಜೀವ್ 1984ನೇ ಬ್ಯಾಚ್ ನ ಜಾರ್ಖಂಡ್ ಕೇಡರ್ ಅಧಿಕಾರಿಯಾಗಿದ್ದು, ಇವರ ಅಧಿಕಾರಾವಧಿ 2025ರವರೆಗೂ ಇರಲಿದೆ. ಆದ್ದರಿಂದ 2024ನೇ ಸಾಲಿನ ಲೋಕಸಭೆ ಚುನಾವಣೆ ಇವರ ಅವಧಿಯಲ್ಲೇ ನಡೆಯಲಿದೆ.