ರಾಜೀವನಗರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರದ ಉದ್ಘಾಟನೆ

ಮಣಿಪಾಲ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಉಡುಪಿ ತಾಲೂಕು ಇದರ ವತಿಯಿಂದ 80ನೇ ಬಡಗಬೆಟ್ಟು ಗ್ರಾಮದ ರಾಜೀವನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಜ್ಯೋತಿ’ ಹೊಸ ಜ್ಞಾನವಿಕಾಸ ಕೇಂದ್ರದ ಉದ್ಘಾಟನೆ ಹಾಗೂ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಜನಜಾಗೃತಿ ವೇದಿಕೆಯ ಮಣಿಪಾಲ ವಲಯದ ಅಧ್ಯಕ್ಷ ಶಂಕರ್ ಕುಲಾಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. 80 ಬಡಗಬೆಟ್ಟು ಬಿ ಒಕ್ಕೂಟದ ಅಧ್ಯಕ್ಷೆ ಪ್ರಿಯಾಂಕಾ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಪೊಲೀಸ್ ಠಾಣೆಯ ಎಎಸ್ಐ ನಾಗೇಶ್ ನಾಯಕ್ ದುಶ್ಚಟದಿಂದಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.

ಯೋಜನೆಯ ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಂ., ಮಣಿಪಾಲ ವಲಯದ ಒಕ್ಕೂಟಗಳ ಅಧ್ಯಕ್ಷ ಚಂದ್ರಶೇಖರ್ ಉಪಸ್ಥಿತರಿದ್ದರು. ಮಣಿಪಾಲ ವಲಯದ ಮೇಲ್ವಿಚಾರಕಿ ಮಂಜುಳಾ ಸ್ವಾಗತಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಕವಿತಾ ಕಾರ್ಯಕ್ರಮ ನಿರೂಪಿಸಿದರು. 80 ಬಡಗಬೆಟ್ಟು ಬಿ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಶಶಿಕಲಾ ವಂದಿಸಿದರು.