ಬೈಂದೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನೀಡುತ್ತಿರುವ ಶ್ರೇಷ್ಠ ಸಹಕಾರಿ ರಾಜ್ಯ ಪ್ರಶಸ್ತಿಗೆ ಸಹಕಾರಿ ಧುರೀಣ, ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಭಾಜನರಾಗಿದ್ದು, ಅವರು ಬುಧವಾರ ಮೈಸೂರು ಮುಕ್ತ ವಿಶ್ವವಿದ್ಯಾನಿಲಯದ ಘಟಿಕೋತ್ಸವ ಭವನದಲ್ಲಿ ಸಂಯುಕ್ತ ಸಹಕಾರಿ ನೇತೃತ್ವದಲ್ಲಿ ನಡೆದ ೬೬ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದರು.
ರಾಜ್ಯ ಸಹಕಾರಿ ಸಚಿವ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಶಾಸಕ ಜಿ. ಟಿ. ದೇವೇಗೌಡ, ಕರ್ನಾಟಕ ರಾಜ್ಯ ಪತ್ತಿನ ಸಹಕಾರ ಮಹಾಮಂಡಲದ ಅಧ್ಯಕ್ಷೆ ಲಲಿತಾ ಜಿ. ಟಿ. ದೇವೇಗೌಡ, ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಎನ್. ಗಂಗಣ್ಣ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಬಿ. ಎಚ್. ಕೃಷ್ಣಾ ರೆಡ್ಡಿ, ನಿರ್ದೇಶಕ ಮಂಜುನಾಥ ಎಸ್. ಕೆ ಮೊದಲಾದವರು ಇದ್ದರು.