ರಾಜ್ಯ ಬಿಜೆಪಿ ಪ್ರಭಾವಿ ಹುದ್ದೆಗೆ ಸುನಿಲ್ ಕುಮಾರ್?

ಬೆಂಗಳೂರು: ರಾಜ್ಯ ಬಿಜೆಪಿಯ ಅತ್ಯಂತ ಪ್ರಭಾವಿ ಹುದ್ದೆಯಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ  ಶಾಸಕ, ವಿಧಾನ ಸಭೆಯ ಮುಖ್ಯ ಸಚೇತಕ ವಿ. ಸುನಿಲ್ ಕುಮಾರ್  ಅವರ ಹೆಸರು ಕೇಳಿಬಂದಿದೆ ಎನ್ನಲಾಗಿದೆ.
ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅನಂತರದ ಪ್ರಮುಖ ಹುದ್ದೆ ಇದಾಗಿದ್ದು, ಸುನಿಲ್ ಸೇರ್ಪಡೆಗೆ ಸಂಘಪರಿವಾರ, ಸಿಎಂ ಯಡಿಯೂರಪ್ಪ ಸೇರಿದಂತೆ ಪಕ್ಷದ ಪ್ರಮುಖರೂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಬಿಜೆಪಿಗೆ ನೂತನ ಪದಾಧಿಕಾರಿಗಳ ನೇಮಕ ಪ್ರಕ್ರಿಯೆಯನ್ನ ನಳಿನ್ ಕುಮಾರ್ ಕಟೀಲ್ ಈಗಾಗಲೇ ಆರಂಭಿಸಿದ್ದು ಅದ್ರಲ್ಲಿ ಪ್ರಭಾವಿ ಹುದ್ದೆಗೆ ಮೊದಲ ಆಯ್ಕೆಯಾಗಿ ಸುನಿಲ್ ಕುಮಾರ್ ನೇಮಕಕ್ಕೆ ಕಟೀಲ್ ಮುಂದಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಸುನಿಲ್ ಕುಮಾರ್ ಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆ ಹೈಕಮಾಂಡ್ ಕೂಡ ಒಪ್ಪಿಗೆ ನೀಡಿದ್ದು, ಅಧಿಕೃತ ಘೋಷಣೆಯಾಗಲಿದೆ ಎನ್ನಲಾಗಿದೆ.