ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಇನ್ನಿಲ್ಲ

ಮಂಗಳೂರು: ಮಾಜಿ ಕೇಂದ್ರ ಸಚಿವ, ಹಾಲಿ ರಾಜ್ಯಸಭಾ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು (80) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಕಳೆದ ಹಲವು ದಿನಗಳಿಂದ ಮಂಗಳೂರಿನ ಯೇನಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆಸ್ಕರ್ ಫೆರ್ನಾಂಡಿಸ್ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾದರು.

ಉಡುಪಿಯಿಂದ ರಾಜಕೀಯ ಜೀವನವನ್ನು ಆರಂಭಿಸಿದ ಅವರು ಬಳಿಕ ಹಂತ ಹಂತವಾಗಿ ಉನ್ನತ ಸ್ಥಾನಕ್ಕೇರಿದ್ದರು. ಆಸ್ಕರ್ ಫೆರ್ನಾಂಡಿಸ್ ಪತ್ನಿ ಬ್ಲೋಸಂ ಫೆರ್ನಾಂಡಿಸ್, ಪುತ್ರ ಓಶಾನ್, ಪುತ್ರಿ ಓಶಾನಿ, ಅಳಿಯ ಮಾರ್ಕ್, ಸೊಸೆ ಫ್ರೆಜಿಲ್ ಮತ್ತು ಕುಟುಂಬಸ್ಥರು ಸಹಿತ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.
ಆಸ್ಕರ್ ಅವರು ಇಂದಿರಾ ಗಾಂಧಿ ಕುಟುಂಬಕ್ಕೆ ಆಪ್ತರಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಪ್ರಭಾವಿ ನಾಯಕರಾಗಿದ್ದರು.