ನವದೆಹಲಿ: ವಿಪಕ್ಷಗಳ ತೀವ್ರ ವಿರೋಧದ ನಡುವೆ ಬುಧವಾರ ರಾಜ್ಯಸಭೆಯಲ್ಲಿ ಮೂರು ಪ್ರಮುಖ ಕಾರ್ಮಿಕ ಸುಧಾರಣಾ ಮಸೂದೆಗಳನ್ನು ಧ್ವನಿಮತದ ಮೂಲಕ ಅಂಗೀಕರಿಸಲಾಯಿತು.
ಕೈಗಾರಿಕಾ ವ್ಯವಹಾರಗಳ ಮಾರ್ಗದರ್ಶಿ ವಿಧೇಯಕ, ಸಾಮಾಜಿಕ ಸುರಕ್ಷತಾ ಮಾರ್ಗದರ್ಶಿ ವಿಧೇಯಕ ಹಾಗೂ ವೃತ್ತಿ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ವಾತಾವರಣ ಮಾರ್ಗದರ್ಶಿ ವಿಧೇಯಕಗಳಿಗೆ ಅನುಮೋದನೆ ಪಡೆಯಲಾಯಿತು.
ಮಸೂದೆಗಳ ಬಗ್ಗೆ ಕಾರ್ಮಿಕ ಸಚಿವ ಸಂತೋಷ್ ಗಾಂಗ್ವಾರ್ ಮಾತನಾಡಿ, ವಾಣಿಜ್ಯ ಕೇತ್ರದಲ್ಲಿ ಆಗುತ್ತಿರುವ ಬದಲಾವಣೆಗೆ ಅನುಗುಣವಾಗಿ ಕಾರ್ಮಿಕ ಕಾಯ್ದೆಗಳಿಗೆ ಸುಧಾರಣೆ ತರಲಾಗುತ್ತಿದೆ ಎಂದರು.
ದೇಶದ 16 ರಾಜ್ಯಗಳಲ್ಲಿ ಮುನ್ನೂರಕ್ಕಿಂತ ಕಡಿಮೆ ಉದ್ಯೋಗಿಗಳಿರುವ ಕಂಪನಿಗಳನ್ನು ಸರ್ಕಾರದ ಅನುಮತಿ ಪಡೆಯದೇ ಮುಚ್ಚುವ ಪ್ರಕ್ರಿಯೆ ನಡೆಯುತ್ತಿದೆ. ಇದಕ್ಕೆ ಕಡಿವಾಣ ಹಾಕುವುದರ ಜತೆಗೆ ಉದ್ಯೋಗ ಸೃಷ್ಟಿಗೆ ಈ ಕಾಯ್ದೆಗಳು ಪೋತ್ರಾಹ ನೀಡಲಿದೆ ಎಂದು ಹೇಳಿದರು.