ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾ ಆಗಸ್ಟ್ ತಿಂಗಳಿನಲ್ಲಿ ಬಿಡುಗಡೆಯಾಗಲಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ವಿಷಯವನ್ನು ಚಿತ್ರದ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅವನೇ ಶ್ರೀಮನ್ನಾರಾಯಣ ಸೆಟ್ ನಲ್ಲಿ ಕಂಡ ರವಿಮಾಮ ಜೊತೆಗೆ ಈ ಚಿತ್ರ ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ತೆರೆ ಕಾಣಲಿದೆಯಂತೆ. ಕಿರಿಕ್ ಪಾರ್ಟಿ ಸಿನಿಮಾದ ಅನಂತರ ರಕ್ಷಿತ್ ನಟನೆಯ ಬೇರೆ ಸಿನಿಮಾ ಬಿಡುಗಡೆಯಾಗಿಲ್ಲ. ಅವನೇ ಶ್ರೀಮನ್ನಾರಾಯಣ ಸಿನಿಮಾವನ್ನು ಸಚಿನ್ ರವಿ ನಿರ್ದೇಶನ ಮಾಡಿದ್ದಾರೆ. ನಟಿ ಶಾನ್ವಿ ಶ್ರೀವತ್ಸವ್ ಮೊದಲ ಬಾರಿಗೆ ರಕ್ಷಿತ್ ಶೆಟ್ಟಿ ಜೊತೆಗೆ ಕಾಣಿಸಿಕೊಂಡಿದ್ದಾರೆ.” ಎಂದು ತಿಳಿದು ಬಂದಿದೆ.