ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಕೋಟಿ ಚೆನ್ನಯ್ಯ ಸೈನಿಕ ತರಬೇತಿ ಶಾಲೆಗೆ ಪ್ರಶಿಕ್ಷಣಾರ್ಥಿಗಳನ್ನು ಆಯ್ಕೆ ಮಾಡುವ ಸಲುವಾಗಿ ಸೆಪ್ಟಂಬರ್ 1 ರಂದು ಬೆಳಗ್ಗೆ 9 ಕ್ಕೆ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ರ್ಯಾಲಿ ನಡೆಯಲಿದ್ದು, ಆಸಕ್ತ ಪುರುಷ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಹಾಗೂ ಆಧಾರ್ ಕಾರ್ಡ್ ಮೂಲ ಪ್ರತಿಯೊಂದಿಗೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.