ರಾಮನಗರ: ಪಾದರಾಯನಪುರ ಗಲಭೆಯ ಆರೋಪಿಗಳನ್ನ ರಾಮನಗರದ ಕಾರಾಗೃಹಕ್ಕೆ ಕರೆತಂದಿದ್ದ ಸುದ್ದಿ ಮಾಡಿ ಬರುತ್ತಿದ್ದ ಸಂದರ್ಭದಲ್ಲಿ ಹಿಂದಿನಿಂದ ಬಂದ ಎಟಿಎಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಹನುಮಂತ ಕಳೆದ 6 ವರ್ಷಗಳಿಂದ ರಾಮನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರು ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದು, ಒಂದು ವರ್ಷದ ಮಗುವಿದೆ.