ಉಡುಪಿ: ಕಾಂಗ್ರೆಸ್ ಮುಖಂಡ, ಗ್ರಾಪಂ ಹಾಲಿ ಸದಸ್ಯ ಎನ್. ರಮೇಶ್ ಶೆಟ್ಟಿ ಕುಕ್ಕೆಹಳ್ಳಿ ಅವರಿಗೆ ಜೀವ ಬೆದರಿಕೆ ಹಾಕಿ ಮನೆ, ಕಾರಿಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಎಸ್ಪಿ ವಿಷ್ಣುವರ್ಧನ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು.
ರಮೇಶ್ ಶೆಟ್ಟಿಗೆ ಬೆದರಿಕೆ ಮತ್ತು ಕಾರು, ಮನೆಗೆ ಹಾನಿ ಮಾಡಿರುವ ಆರೋಪಿಗಳನ್ನು ಗೂಂಡಾಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಕೈ ನಾಯಕರು ಒತ್ತಾಯಿಸಿದರು.
ಈ ವೇಳೆ ಜಿಲ್ಲಾ ಪಂಚಾಯಿತಿ ಸದಸ್ಯ ಜನಾರ್ದನ ತೋನ್ಸೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮಾಜಿ ಜಿಪಂ ಅಧ್ಯಕ್ಷ ಭುಜಂಗ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ನಾಯಕರಾದ ಯತೀಶ್ ಕರ್ಕೇರಾ, ಕೃಷ್ಣಪ್ಪ ಪೂಜಾರಿ, ಸತೀಶ್ ಉಪ್ಪೂರು, ರೆಹಮಾನ್, ಪ್ರದೀಪ್ ಅಂಚನ್ ಉಪಸ್ಥಿತರಿದ್ದರು.