ರಂಗರಂಗು – ಮಕ್ಕಳ ಬೇಸಿಗೆ ಶಿಬಿರ

 

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಸೊಸೈಟಿ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆ (ರಿ) ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ರಂಗರಂಗು- ಮಕ್ಕಳ ಉಚಿತ ಬೇಸಿಗೆ ಶಿಬಿರವು ಮೇ 1 ರ ವರೆಗೆ ಕುಂದಾಪುರ ಬಾಲಭವನ ಸಭಾಭವನದಲ್ಲಿ ನಡೆಯಲಿದೆ.

ಶಿಬಿರದಲ್ಲಿ 05 ರಿಂದ 16 ವರ್ಷದೊಳಗಿನ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು, ವಿಕಲಚೇತನರು, ಹೆಚ್.ಐ.ವಿ
ಸೋಂಕು ಪೀಡಿತ ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಲೋಕೋಪಯೋಗಿ ಕಚೇರಿ ಹಿಂಭಾಗ, ಕುಂದಾಪುರ ದೂರವಾಣಿ ಸಂಖ್ಯೆ: 08254-230807 ಅನ್ನು ಸಂಪರ್ಕಿಸುವಂತೆ ಕುಂದಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.