ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ: ಇಲ್ಲಿನ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ 2022 – 23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದ ರ‍್ಯಾಂಕ್ ಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.

ವಿಜ್ಞಾನ ವಿಭಾಗದಲ್ಲಿ ನೇಹಾ ಜೆ.ರಾವ್ 3ನೇ, ಸೃಜನ್ ಭಟ್ 6ನೇ, ಪ್ರಣಮ್ಯ 7 ನೇ, ಪ್ರಜ್ಞಾ ಶೆಟ್ಟಿ , ನಿತೇಶ್, ಇಂಚರ 8ನೇ, ಮಯೂರ್ ಶೆಟ್ಟಿ 9ನೇ , ಉಜ್ವಲ ಶೇಟ್, ಸಂಜನಾ ಶೆಟ್ಟಿ 10ನೇ ರ‍್ಯಾಂಕ್ ಹಾಗೂ ವಾಣಿಜ್ಯ ವಿಭಾಗದಲ್ಲಿ ನೇಹಾ ಎಸ್. ರಾವ್ 5ನೇ, ಲಿಪಿಕಾ. ಕೆ 6ನೇ ಎಸ್ ವೈಷ್ಣವಿ, ಸಮೃದ್ಧಿ ಪೈ 10 ನೇ ರ‍್ಯಾಂಕ್ ದಾಖಲಿಸಿದ್ದು ಈ 13 ವಿದ್ಯಾರ್ಥಿಗಳಿಗೆ ಬೆಳ್ಳಿಲೋಟ, ಬೆಳ್ಳಿ ನಾಣ್ಯ, ಫಲ, ಪುಷ್ಪ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾದ 218 ವಿದ್ಯಾರ್ಥಿಗಳಿಗೆ ಬೆಳ್ಳಿ ನಾಣ್ಯ ನೀಡಿ ಗೌರವಿಸಲಾಯಿತು.

ಸನ್ಮಾನ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿದ್ದ ಭಂಡಾರ್‌ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಿ. ಎಂ ಗೊಂಡ ಅವರು ಮಾತನಾಡಿ, ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ವಿಪುಲ ಅವಕಾಶ ಇದೆ ಅದರ ಸದುಪಯೋಗವನ್ನು ಪಡೆದುಕೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಆಡಳಿತ ಮಂಡಳಿ ಕಾರ್ಯದರ್ಶಿಕೆ. ರಾಧಾಕೃಷ್ಣ ಶೆಣೈ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ರಾಗಿಣಿ, ವೆಂಕಟರಮಣ ಸಂಸ್ಥೆಯ ಆಡಳಿತಾಧಿಕಾರಿ ಪ್ರಭಾಕರ್ ಶ್ಯಾನುಭೋಗ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಿಂದಿ ಉಪನ್ಯಾಸಕಿ ಸುಕಿತಾ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕ ಮಂಜುನಾಥ್ ವಂದಿಸಿ, ಇಂಗ್ಲೀಷ್ ಉಪನ್ಯಾಸಕ ಅಶೋಕ್ ಕಾರ್ಯಕ್ರಮ ನಿರೂಪಿಸಿದರು.