ಸುಳ್ಯ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಕಲ್ಮಡ್ಕ ಗ್ರಾಪಂ ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕಲ್ಮಡ್ಕ ಗ್ರಾಮದ ವಾರ್ಡ್-1ರಿಂದ ಸ್ಪರ್ಧಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹುಕ್ರಪ್ಪ ಯಾನೆ ನಾರಾಯಣ ಪುಚ್ಚಮ ಎಂದು ಗುರುತಿಸಲಾಗಿದೆ.
ಈತ ತನ್ನ ಚಿಕ್ಕಪ್ಪನ ಮಗಳಾದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ಮನೆಯವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.