ಉಡುಪಿ: ಕೊರೊನಾ ನಿಯಂತ್ರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತಷ್ಟು ಬಿಗಿ ಕ್ರಮಕೈಗೊಂಡಿದೆ.
ನೂತನ ನಿಯಮದಂತೆ ಇಂದು ನಗರಸಭೆ ವ್ಯಾಪ್ತಿಯಲ್ಲಿರುವ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲ ಅಂಗಡಿಗಳನ್ನು ನಗರಸಭೆ ಅಧಿಕಾರಿಗಳು ಬಂದ್ ಮಾಡಿಸಿದ್ದಾರೆ.
ಕಟಪಾಡಿ, ಶಿರ್ವ ಹಾಗೂ ಕಾಪು ಪೇಟೆಯಲ್ಲಿ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತುಪಡಿಸಿ ಇತರ ಅಂಗಡಿ– ಮುಂಗಟ್ಟುಗಳನ್ನು ಸ್ವಯಂ ಪ್ರೇರಿವಾಗಿ ಮುಚ್ಚುವಂತೆ ಕಾಪು ಪೊಲೀಸರು ಅಂಗಡಿ ಮಾಲೀಕರಲ್ಲಿ ಮನವಿ ಮಾಡಿದರು.