ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಚಾಲನೆ, ಕ್ರೀಡೆಯಲ್ಲಿ ಸಾಕಷ್ಟು ಅವಕಾಶ: ರವೀಂದ್ರ ರೈ

ಉಡುಪಿ: ಕ್ರೀಡೆಯಲ್ಲಿ ಸಾಕಷ್ಟು ಅವಕಾಶಗಳಿದ್ದು, ಮಕ್ಕಳು ಆಸಕ್ತಿ ತೋರಿಸುವ
ಕ್ಷೇತ್ರಗಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು. ಇದರಿಂದ ಮಕ್ಕಳು ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಬ್ಯಾಂಕ್ ಆಫ್‌- ಬರೋಡಾದ ಪ್ರಾದೇಶಿಕ ಪ್ರಬಂಧಕ ರವೀಂದ್ರ ರೈ ಹೇಳಿದರು.
ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ವತಿಯಿಂದ ಬ್ಯಾಂಕ್ ಆ- ಬರೋಡ ಸಹ
ಪ್ರಾಯೋಜಕತ್ವದಲ್ಲಿ ೧೩ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರಿಗೆ ಏರ್ಪಡಿಸಲಾದ ಆರು ದಿನಗಳ ಅಖಿಲ ಭಾರತ ಸಬ್ ಜ್ಯೂನಿಯರ್ ರ‍್ಯಾಂಕಿಂಗ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಟೂರ್ನಮೆಂಟ್‌ಗೆ ಮಂಗಳವಾರ ಮಣಿಪಾಲದ ಮರಿನಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿ  ಮಾತನಾಡಿದರು.
ಬ್ಯಾಡ್ಮಿಂಟನ್ ಅಸೋಸಿಯೇಶನ್ ಆ- ಇಂಡಿಯಾ ಇದರ ವೀಕ್ಷಕ ಸುಖಾಂತ ದಾಸ್ ಮಾತನಾಡಿದರು.
ಮಣಿಪಾಲ ವಿವಿಯ ಪ್ರೊಚಾನ್ಸೆಲರ್ ಡಾ.ಎಚ್.ಎಸ್.ಬಲ್ಲಾಳ್ ಅಧ್ಯಕ್ಷತೆ ವಹಿಸಿದ್ದರು.
ಬ್ಯಾಡ್ಮಿಂಟನ್ ಆಡುವ ಮೂಲಕ ಪಂದ್ಯಾಟಕ್ಕೆ ಉಡುಪಿ ಜಿಲ್ಲಾಧಿಕಾರಿ ಹೆಫ್ಸಿಬಾರಾಣಿ
ಕೊರ್ಲಪಾಟಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕ್ರೀಡಾಕೂಟಕ್ಕೆ ಬ್ಯಾಂಕ್ ಆ- ಬರೋಡಾದಿಂದ ನೀಡಲಾದ ಐದು ಲಕ್ಷ ರೂ. ಮೊತ್ತದ ಚೆಕನ್ನು ರವೀಂದ್ರ ರೈ ಅಸೋಸಿಯೇಶನ್ ಅಧ್ಯಕ್ಷ ರಘುಪತಿ ಭಟ್‌ಗೆ ಹಸ್ತಾಂತರಿಸಿದರು.
ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ಉದ್ಯಮಿ ಗಳಾದ ಗುರ್ಮೆ ಸುರೇಶ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಬಡಗಬೆಟ್ಟು ಸೊಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಮೀನು ಮಾರಾಟ -ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಮಾಹೆ ಕ್ರೀಡಾ ನಿರ್ದೇಶಕ ಡಾ. ವಿನೋದ್ ನಾಯಕ್ ಉಪಸ್ಥಿತರಿದ್ದರು.
ಉಡುಪಿ ಶಾಸಕ ಹಾಗೂ ಅಸೋಸಿಯೇಶನ್ ಅಧ್ಯಕ್ಷ ಕೆ.ರಘುಪತಿ ಭಟ್ ಪ್ರಾಸ್ತಾವನೆಗೈದರು. ಪ್ರಧಾನ ಕಾರ್ಯದರ್ಶಿ ವೈ.ಸುಧಿರ್ ಕುಮಾರ್ ವಂದಿಸಿದರು. ಶೋಭಾ ಕಾರ್ಯಕ್ರಮ ನಿರೂಪಿಸಿದರು.
ಜು.೬ರ ವರೆಗೆ ನಡೆಯುವ ಈ ಕ್ರೀಡಾಕೂಟದಲ್ಲಿ ಭಾರತ ದೇಶವನ್ನು ಪ್ರತಿನಿಧಿಸುವ ಆಟಗಾರರಲ್ಲದೆ ದೇಶದ ಎಲ್ಲ ರಾಜ್ಯದ ಅಗ್ರ ಶ್ರೇಯಂಕಿತ ಸುಮಾರು ಒಂದು ಸಾವಿರ ಆಟಗಾರರು ಮತ್ತು ೫೦ ಮಂದಿ ತೀರ್ಪುಗಾರರು ಭಾಗವಹಿಸಿದ್ದಾರೆ.