ಕೋವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಪಡಿತರ ಸ್ಥಗಿತ: ಸಚಿವ ಮಾಧುಸ್ವಾಮಿ

ಬೆಂಗಳೂರು: ಕೋವಿಡ್ ಸೋಂಕನ್ನು ನಿಯಂತ್ರಿಸಲು ಲಸಿಕೆ ಹಾಕಿಸಿಕೊಳ್ಳುವುದು ಅನಿವಾರ್ಯವಾಗಿದೆ. ಈಗ ಎಲ್ಲ ಕಡೆ ಲಸಿಕೆ ಲಭ್ಯವಿದೆ. ಆದರೂ ಪಡೆದುಕೊಳ್ಳಲು ಮುಂದೆ ಬರುತ್ತಿಲ್ಲ. ಹೀಗಾಗಿ ಲಸಿಕೆ ಹಾಕಿಸಿಕೊಳ್ಳದವರಿಗೆ ಪಡಿತರ ನೀಡುವುದನ್ನು ಸ್ಥಗಿತಗೊಳಿಸುವಂತೆ ಸೂಚನೆ ನೀಡಿದ್ದೇವೆ ಎಂದು ಕಾನೂನು ಸಚಿವ ಜೆ.ಸಿ‌. ಮಾಧುಸ್ವಾಮಿ ಹೇಳಿದ್ದಾರೆ.

ಕೊರೊನಾ ಸೋಂಕು ಯಾವ ಸಮಯದಲ್ಲಿ ಬೇಕಾದರೂ ಹೆಚ್ಚಾಗಬಹುದು. ಹೀಗಾಗಿ ಕೊರೊನಾ ನಿಯಂತ್ರಿಸಲು ಈಗಿನಿಂದಲೇ ಕ್ರಮ ಕೈಗೊಳ್ಳದಿದ್ದರೆ ಮಂದೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದಿದ್ದಾರೆ.