ಬೆಂಗಳೂರು: ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ನ ನ ಸ್ಥಾಪಕ ರವಿ ಬೆಳೆಗೆರೆ (62) ಶುಕ್ರವಾರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಬೆಳಗೆರೆ ಅಕ್ಷರ ಮಾಂತ್ರಿಕ ಎಂದೇ ಖ್ಯಾತರಾಗಿದ್ದರು.ಈ ಕಾಲದ ಯುವಜನತೆಯ ಮೆಚ್ಚಿನ ಲೇಖಕರಾಗಿದ್ದರು.
1958 ರ ಮಾರ್ಚ್ 15 ರಂದು ಬಳ್ಳಾರಿಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ನಂತರ ಪತ್ರಿಕೋದ್ಯಮ ವೃತ್ತಿ ಪ್ರಾರಂಭಿಸಿದ್ದ ಅವರು, ಕನ್ನಡಪ್ರಭ, ಸಂಯುಕ್ತ ಕರ್ನಾಟಕ ಸೇರಿದಂತೆ ಹಲವು ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದರು, ನಂತರ 1995 ರಲ್ಲಿ ಹಾಯ್ ಬೆಂಗಳೂರು ಟಾಬ್ಲಾಯ್ಡ್ ಪತ್ರಿಕೆಯನ್ನು ಪ್ರಾರಂಭಿಸಿದ್ದರು.
ರವಿ ಬೆಳೆಗೆರೆ ಅವರ ಬಾಟಮ್ ಐಟಮ್, ಖಾಸ್ ಬಾತ್ ಅಂಕಣಗಳು ಅತ್ಯಂತ ಜನಪ್ರಿಯ. ಹಿಮಾಗ್ನಿ, ನೀನಾ ಪಾಕಿಸ್ತಾನ? ಡಿ ಕಂಪನಿ, ದಂಗೆಯ ದಿನಗಳು,ಹೇಳಿ ಹೋಗು ಕಾರಣ ಸೇರಿದಂತೆ 50ಕ್ಕೂ ಹೆಚ್ಚಿನ ಕೃತಿಗಳನ್ನು ಬರೆದಿದ್ದರು