ಭಾರತ ತಂಡದ ಖ್ಯಾತ, ಕಲಾತ್ಮಕ ವೇಗಿ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ ಗುಡ್ ಬೈ ಹೇಳಿದ್ದಾರೆ.ಆಸ್ಟ್ರೇಲಿಯಾದ ಟೆಸ್ಟ್ ಸರಣಿಯ ವೇಳೆ ಸುದ್ದಿಗೋಷ್ಟಿಯಲ್ಲಿ ಅವರು ಈ ನಿರ್ಧಾರ ಘೋಷಿಸಿದ್ದಾರೆ. ರವಿಚಂದ್ರನ್ ಅಶ್ವಿನ್ ಒಟ್ಟು 106 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ, 200 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಟೆಸ್ಟ್ ನಲ್ಲಿ 27246 ಎಸೆತಗಳನ್ನು ಎಸೆದು ಭರ್ಜರಿ 537 ವಿಕೆಟ್ ಉರುಳಿಸಿದ್ದಾರೆ.
116 ಏಕದಿನ ಪಂದ್ಯಗಳಲ್ಲಿ 114 ಇನಿಂಗ್ಸ್ ಆಡಿ 156 ವಿಕೆಟ್ ಪಡೆದರೆ, 65 ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿ 72 ವಿಕೆಟ್ ಕಬಳಿಸಿದ್ದಾರೆ. ಒಟ್ಟಾಯಲ್ಲಿ ಕ್ರಿಕೆಟ್ ಬದುಕಿನಲ್ಲಿ ಹಲವಾರು ಮೈಲಿಗಲ್ಲುಗಳನ್ನು ದಾಟಿ, ದಾಖಲೆ ಬರೆದಿದ್ದಾರೆ. ಭಾರತದ ಪರ ಅತ್ಯಧಿಕ ವಿಕೆಟ್ ಕಬಳಿಸಿದ 2ನೇ ಬೌಲರ್ ಎನಿಸಿಕೊಂಡಿದ್ದಾರೆ.
ಆದರೆ ಒಳ್ಳೆಯ ಬೌಲರ್ ದಿಢೀರ್ ನಿವೃತ್ತಿ ಘೋಷಿಸಿದ್ದು ಶಾಕ್ ಮೂಡಿಸಿದ್ದು ಮಾತ್ರವಲ್ಲ, ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳಿಗೆ ನಿರಾಶೆ ಕೂಡ ತಂದಿದೆ. ಒಂದು ಅದ್ಬುತ ಸ್ಪಿನ್ನರ್ ನ ಯುಗಾಂತ್ಯವಾಗಿದೆ.