ನವದೆಹಲಿ: 2000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದಾಗ್ಯೂ, ನೋಟುಗಳು ಸೆಪ್ಟೆಂಬರ್ 30 ರ ವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತದೆ ಎಂದು ಕೇಂದ್ರ ಬ್ಯಾಂಕ್ ಶುಕ್ರವಾರ ಹೇಳಿಕೆಯಲ್ಲಿ ತಿಳಿಸಿದೆ.
ಬ್ಯಾಂಕ್ ಗಳು 2000 ಮುಖಬೆಲೆಯ ನೋಟಗಳನ್ನು ಜಾರಿಗೊಳಿಸದಂತೆ ತಕ್ಷಣ ದಿಂದ ಜಾರಿಗೆ ಬರುವಂತೆ ಆರ್ ಬಿ ಐ ಆದೇಶ ಹೊರಡಿಸಿದೆ.
ಸಾರ್ವಜನಿಕರು ತಮ್ಮಲ್ಲಿರುವ 2000 ರೂ ನೋಟುಗಳನ್ನು ಬ್ಯಾಂಕ್ ಗಳಿಗೆ ನೀಡಿ ಇತರ ಮುಖ ಬೆಲೆ ನೋಟು ಗಳನ್ನು ಪಡೆಯಬಹುದು ಎಂದು ಬ್ಯಾಂಕ್ ತಿಳಿಸಿದೆ.