ಮರು ಮೌಲ್ಯಮಾಪನ: 11 ಅಂಕಗಳನ್ನು ಕಳೆದುಕೊಂಡ ವಿದ್ಯಾರ್ಥಿನಿ

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮರು ಮೌಲ್ಯಮಾಪನಕ್ಕೆ ಹಾಕಿ 11 ಅಂಕಗಳನ್ನು ಕಳೆದುಕೊಂಡಿದ್ದಾಳೆ.

ಶಿವಮೊಗ್ಗ ಜಿಲ್ಲೆ ಹೊಸನಗರ ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಧಾರಿಣಿ
ಅಂಕ ಕಳೆದುಕೊಂಡಿದ್ದಾಳೆ.

ದ್ವಿತೀಯ ಪಿಯುಸಿ ಪರೀಕ್ಷೆಯ ಅಕೌಂಟೆನ್ಸಿ ವಿಷಯದಲ್ಲಿ 99 ಅಂಕ ಗಳಿಸಿದ್ದಳು.‌ ಆದರೆ ಆಕೆಗೆ ನೂರಕ್ಕೆ ನೂರು ಅಂಕ ಗಳಿಸುವ ವಿಶ್ವಾಸವಿದ್ದ ಕಾರಣ ಮರು ಮೌಲ್ಯಮಾಪನಕ್ಕೆ ಹಾಕಿದ್ದಳು. ಮರು ಮೌಲ್ಯಮಾಪನದಲ್ಲಿ 88 ಅಂಕ ಬಂದು ಬರೋಬ್ಬರಿ 11 ಅಂಕ ಕಡಿತಗೊಂಡಿದೆ.

ಮರುಮೌಲ್ಯಮಾಪನದಲ್ಲಿ  ಕಡಿಮೆ ಅಂಕ ಬಂದಿದ್ದರಿಂದ ಪಾಲಕರೊಂದಿಗೆ ಪಿಯು ಮಂಡಳಿಯನ್ನು ಸಂಪರ್ಕಿಸಿದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಸಮರ್ಪಕ ಉತ್ತರ ನೀಡಿಲ್ಲ. ಇದು ಪಿಯು ಮಂಡಳಿಯ ನಿರ್ಲಕ್ಷ್ಯವೆಂದು ವಿದ್ಯಾರ್ಥಿನಿ ಅಳಲು ತೋಡಿಕೊಂಡಿದ್ದಾಳೆ.