ಧರ್ಮಸ್ಥಳ ಸೌಜನ್ಯ ಪ್ರಕರಣದ ಮರುತನಿಖೆ: ದಾಖಲೆಗಳ ಬ್ಯಾಗ್ ಹಿಡಿದು ಎಸ್‌ಐಟಿ ಕಚೇರಿಗೆ ಬಂದ ಗಿರೀಶ್ ಮಟ್ಟಣ್ಣನವರ್

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಯನ್ನು ವಿಶೇಷ ತನಿಖಾ ತಂಡ (SIT) ಚುರುಕುಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಅವರು ಮಂಗಳೂರಿನ ಎಸ್‌ಐಟಿ ಕಚೇರಿಗೆ ದಾಖಲೆಗಳ ಬ್ಯಾಗ್‌ನೊಂದಿಗೆ ಆಗಮಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಇರುವ ದಾಖಲೆಗಳು ಹಾಗೂ ಸಾಕ್ಷ್ಯಾಧಾರಗಳನ್ನು ತನಿಖಾಧಿಕಾರಿಗಳಿಗೆ ಸಲ್ಲಿಸುವಂತೆ ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಹಲವು ಕಡತಗಳು ಮತ್ತು ಪತ್ರಿಕಾ ವರದಿಗಳನ್ನು ಸಂಗ್ರಹಿಸಿ ಅವರು ಕಚೇರಿಗೆ ಬಂದಿದ್ದಾರೆ. ಹಲವು ವರ್ಷಗಳಿಂದ ಸೌಜನ್ಯ ಪರ ಹೋರಾಟ ನಡೆಸುತ್ತಿರುವ ಮಟ್ಟಣ್ಣನವರ್, ತಮ್ಮಲ್ಲಿರುವ ಮಾಹಿತಿಯನ್ನು ಅಧಿಕಾರಿಗಳಿಗೆ ಒದಗಿಸುವ ಸಾಧ್ಯತೆಯಿದೆ. ಇದೇ ವೇಳೆ, ಪ್ರಕರಣದ ವಿಚಾರವಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೂ ಎಸ್‌ಐಟಿ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ.