ಕಾಪು: ರಿಯಲ್ ಎಸ್ಟೇಟ್ ಉದ್ಯಮಿ ನಾಪತ್ತೆ

ಉಡುಪಿ: ಕಾಪು ತಾಲೂಕು ಕಟಪಾಡಿ ಕೋಟೆ ಗ್ರಾಮದ ರಿಯಲ್ ಎಸ್ಟೇಟ್ ಉದ್ಯಮಿ ಪ್ರಕಾಶ್ ರಾವ್ (46) ಎಂಬ ವ್ಯಕ್ತಿಯು ಮೇ 9 ರಂದು ಬೆಳಗ್ಗೆ 9 ಗಂಟೆ ಸುಮಾರಿಗೆ ದೇವಸ್ಥಾನಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431 ಅನ್ನು ಸಂಪರ್ಕಿಸುವಂತೆ ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.