ಕಾರ್ಕಳ: ಸ್ವಾತಂತ್ರ್ಯ ಹೋರಾಟಕ್ಕೆ ದುಡಿದು ಮಡಿದ ಸ್ಥಳೀಯ ಮಹಾತ್ಮರನ್ನು ಸ್ಮರಿಸುವುದು ನಮ್ಮ ಆದ್ಯತೆಯಾಗಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಸೈನಿಕ ಸಂಘದ ಉಪಾಧ್ಯಕ್ಷ, ಭಾರತೀಯ ವಾಯು ಸೇನೆಯ ಮಾಜಿ ಸೈನಿಕ ಸಾರ್ಜೆಂಟ್ ಶ್ರೀಕಾಂತ್ ಶೆಟ್ಟಿ.ಬಿ ಹೇಳಿದರು.
ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯಲ್ಲಿ ನಡೆದ 76ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣಗೈದು ಮಾತನಾಡಿದರು. ನಮ್ಮ ಸುತ್ತ ಮುತ್ತಲು ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಗುರುತಿಸಿ ಗೌರವಿಸುವ ಕಾರ್ಯವಾಗಬೇಕು. ಅನೇಕ ಮಹನೀಯರ ಸಾಹಸಗಳನ್ನು ಸಾದರ ಪಡಿಸುತ್ತಾ, ದೇಶದ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಹುಮ್ಮಸ್ಸನ್ನು ತೋರಬೇಕು ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು.
ಕಾರ್ಕಳ ಜ್ಞಾನಸುಧಾ ಪ.ಪೂ ಕಾಲೇಜಿನ ಪ್ರಾಂಶುಪಾಲ ದಿನೇಶ್.ಎಂ.ಕೊಡವೂರ್, ಉಪ ಪ್ರಾಂಶುಪಾಲೆ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಉಪ ಪ್ರಾಂಶುಪಾಲೆ ವಾಣಿ.ಕೆ, ಪಿಆರ್ಒ ಜ್ಯೋತಿ ಪದ್ಮನಾಭ ಭಂಡಿ, ಕಾಲೇಜಿನ ಎನ್.ಎಸ್.ಎಸ್ ಕಾರ್ಯಕ್ರಮಧಿಕಾರಿ ರವಿ ಜಿ, ಎನ್.ಸಿ.ಸಿ ಅಧಿಕಾರಿ ಸುಮಿತ್ ಉಪಸ್ಥಿತರಿದ್ದರು.
ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರಾಂಶುಪಾಲೆ ಉಷಾ ರಾವ್ ಯು ಸ್ವಾಗತಿಸಿ, ಆಂಗ್ಲಭಾಷಾ ಉಪನ್ಯಾಸಕಿ ಸಂಗೀತ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.