ಉಡುಪಿಯಲ್ಲಿದೆ ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್ ತಂತ್ರಜ್ಞರ ಹುದ್ದೆಗೆ ನೇಮಕಾತಿ: ಅರ್ಹತೆ ಏನು? ಸೌಲಭ್ಯಗಳೇನು?

ಉಡುಪಿ: ಹಡಗು ನಿರ್ಮಾಣ ಉದ್ಯಮದಲ್ಲಿ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಉಡುಪಿಯ ಶಿಪ್‌ಯಾರ್ಡ್ ಘಟಕದಲ್ಲಿ ಎಲೆಕ್ಟ್ರಿಕಲ್ ಮತ್ತು ಮೆಕ್ಯಾನಿಕಲ್ ತಂತ್ರಜ್ಞರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವರ್ಕ್ ಮಿತ್ರ (Workmithra) ಸಂಸ್ಥೆಯ ಮೂಲಕ ಪವರ್ ನೆಟ್ ಟೆಕ್ನಿಕಲ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ಈ ನೇಮಕಾತಿ ನಡೆಯಲಿದೆ. ಎಲೆಕ್ಟ್ರಿಕಲ್ ಅಥವಾ ಮೆಕ್ಯಾನಿಕಲ್ ವಿಭಾಗದಲ್ಲಿ ಐಟಿಐ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜತೆಗೆ ನಿರ್ವಹಣಾ ವಿಭಾಗದಲ್ಲಿ 2ರಿಂದ 3 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹22,000ರಿಂದ ₹25,000 ವೇತನದೊಂದಿಗೆ ಪಿಎಫ್ ಮತ್ತು ಇಎಸ್‌ಐ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಇದು ಪೂರ್ಣಾವಧಿ ಉದ್ಯೋಗವಾಗಿದ್ದು, ತಕ್ಷಣವೇ ಕೆಲಸಕ್ಕೆ ಸೇರುವ ಅವಕಾಶವಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 8150000527, 8150000537 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು. ಅಥವಾ [email protected] ಇ-ಮೇಲ್ ಮೂಲಕ ಸಂಪರ್ಕಿಸಬಹುದು. ಹೆಚ್ಚಿನ ವಿವರಗಳಿಗೆ www.workmithra.com ವೆಬ್‌ಸೈಟ್ ಸಂಪರ್ಕಿಸಬಹುದು.