ಉಡುಪಿ; ಕೌನ್ಸಿಲ್ ಆಫ್ ಸೈಂಟಿಫಿಕ್ ಆಂಡ್ ಇಂಡಸ್ಟ್ರಿಯಲ್ ರಿಸರ್ಚ್ನ ಒಂದು ಘಟಕ ಪ್ರಯೋಗಾಲಯವಾಗಿರುವ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ಮೈಸೂರು, ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ತಂತ್ರಜ್ಞ ಹುದ್ದೆಗಳ ನೇರ ನೇಮಕಾತಿಗಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಶೇ.55 ಅಂಕಗಳೊಂದಿಗೆ ಹತ್ತನೇ ತರಗತಿ ಮತ್ತು ಐಟಿಐ ಉತ್ತೀರ್ಣರಾದ ಪ್ರಮಾಣಪತ್ರ ಹೊಂದಿರುವ 28 ವರ್ಷ ವಯಸ್ಸಿನೊಳಗಿನ ಅಭ್ಯರ್ಥಿಗಳಿಂದ ವೆಬ್ಸೈಟ್ https://recruitment.cftri.res.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದ್ದು, ಆನ್ಲೈನ್ ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಮತ್ತು ಭರ್ತಿ ಮಾಡಿದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಲು ನವೆಂಬರ್ 18 ಹಾಗೂ ಅರ್ಜಿಯ ಹಾರ್ಡ್ ಕಾಪಿ ಸಲ್ಲಿಸಲು ನವೆಂಬರ್ 26 ಕೊನೆಯ ದಿನವಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.















